ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ ಶಿವಮೊಗ್ಗ:  ಜಿಲ್ಲೆಯ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದಷ್ಟೆ ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಆರೋಪವೋಂದು ಉಡುಪಿಯಲ್ಲಿ ಕೇಳಿಬಂದಿದೆ. ಪ್ರಕರಣದಲ್ಲಿ ಲಾಡ್ಜ್‌ವೊಂದರಿಂದ ಬಂಧಿಯಾಗಿದ್ದ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಎಂಬಲ್ಲಿ ಲಾಡ್ಜ್‌ವೊಂದರಲ್ಲಿಯಲ್ಲಿ ಮಹಿಳೆಯೊಬ್ಬಳನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿತ್ತು. ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಮೂಲದ ಮಹಿಳೆಯನ್ನು, ಕೆಲಸ ಕೊಡಿಸುವ ನೆಪದಲ್ಲಿ ಇಲ್ಲಿಕೆ ಕರೆತಂದಿದ್ದ ವ್ಯಕ್ತಿಯು ಆಕೆಯನ್ನ ವೇಶ್ಯಾವಾಟಿಕೆಗೆ ತ‍ಳ್ಳಲು ಮುಂದಾಗಿದ್ದ. ಈ…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್ ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, ಫೈರೋಜ್, ಅರ್ಬಾಜ್, ನಯಾಜ್ ಅಹಮದ್, ಸುಹೇಲ್ ಎಂಬ ಆರೋಪಿಗಳಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಜಗದೀಶ್ ಎಂಬುವರು ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನುದಾರರಾಗಿದ್ದರು. ಈ ಪ್ರಕರಣದಲ್ಲಿ ಐದನೇ…

Read More

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನವಾಗಿದೆ. ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ಗಮನಿಸಿದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ….

Read More

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್‌ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.

Read More

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ…

Read More

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ ಫೈನಾನ್ಸ್ ಗಳ ಕಿರುಕುಳಕ್ಕೆ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ‌ ನಗರದಲ್ಲಿ ನಡೆದಿದೆ. ಬಜಾಜ್ ಮತ್ತು ಟಿವಿಎಸ್ ಫೈನಾನ್ಸ್ ನಿಂದ ಸಾಲ ಪಡೆದ ಆಟೋ ಚಾಲಕ ವಿದ್ಯಾನಗರದ ರೈಲ್ವೆ ಗೇಟ್ ಬಳಿ ವಿಷ ಸೇವಿಸಿ ಮಲಗಿದ್ದ  ಮೆಗ್ಗಾನ್ ಗೆ ದಾಖಲಿಸಲಾಗಿದೆ. ಬಜಾಜ್ ನಲ್ಲಿ 1.40 ಸಾಲ ಪಡೆದಿದ್ದರು. ಇದಕ್ಕೆ ತಿಂಗಳು 8.031 ಕಂತು ಕಟ್ಟುತ್ತಿರುವುದಾಗಿ.‌ಒಂದು ವರ್ಷ ತೀರಿಸಿರುವುದಾಗಿ ವಿಷ ಸೇವಿಸಿದ ಚಾಲಕ ವಿವರಿಸಿದ್ದಾರೆ  ಮತ್ತು ಟಿವಿಎಸ್…

Read More