ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ
ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….