Headlines

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More

RIPPONPETE | ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ

ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ. ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ,…

Read More

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು,…

Read More

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ರಿಪ್ಪನ್ ಪೇಟೆ ಪಟ್ಟಣದಲ್ಲಿ ಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಭದ್ರತಾ ದೃಷ್ಟಿಯಿಂದ ರೂಟ್ ಮಾರ್ಚ್ ನಡೆಯಿತು. ಮೆರವಣಿಗೆಗಳ ಸಮಯದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಮುಂಗಡ ಕ್ರಮವಾಗಿ ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ…

Read More

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read More

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…

Read More