Headlines

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು : ಡಿಸಿಎಂ ಡಿ.ಕೆ ಶಿವಕುಮಾರ್

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು : ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ,…

Read More

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ…

Read More

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…

Read More

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…

Read More

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟದ ಎಚ್ಚರಿಕೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟ ಶಿವಮೊಗ್ಗ – ಸಾಗರ ತಾಲೂಕು ಅಂಬಾರಗೊಡ್ಲು ಬಳಿ  ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆಗೋಡು ಎಚ್ಚರಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ. ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು,…

Read More

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಆಗ್ರಹಿಸಿದ್ದಾರೆ. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಿಲ್ಲೆಯನ್ನು  ವಿಶ್ವ…

Read More