Headlines

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…

Read More

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…

Read More

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…

Read More

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ನಡೆದ ಬೈಕ್‌ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್‌ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಕೆಎ 14 ಇಎ 9708 ನೊಂದಣೆಯ ಹಿರೋ ಹೋಂಡಾ ಬೈಕ್ ನಿಲ್ಲಿಸಿದ್ದರು.ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ…

Read More

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು. ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ,…

Read More

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ ಹೊಸನಗರ: ಯೂಟ್ಯೂಬ್‌ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಮಹಿಳೆ ಯೂಟ್ಯೂಬ್ ವೀಕ್ಷಿಸುವ ವೇಳೆ ಷೇರು ಮಾರುಕಟ್ಟೆ ಮಾರ್ಗದರ್ಶನ ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತೊಂದು ತೋರ್ಪಡಿಸಿತು. ಜಾಹೀರಾತಿನ ಕೆಳಗೆ ನೀಡಿದ್ದ ವಾಟ್ಸ್‌ಆ್ಯಪ್ ಗುಂಪಿಗೆ ಸೇರುವ ಲಿಂಕ್‌ನ್ನು…

Read More

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ ನಿಟ್ಟೂರು ಭಾಗದಲ್ಲಿ ಅಭಿವೃದ್ಧಿ ಚುರುಕು – ಶಾಸಕರ ಪ್ರಯತ್ನಕ್ಕೆ ಗ್ರಾಮಸ್ಥರಿಂದ ಕೃತಜ್ಞತೆ ದೇವಸ್ಥಾನಗಳ ಅಭಿವೃದ್ದಿಗೆ ಕ್ಷೇತ್ರದಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಅನುದಾನ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಹಿಂದುತ್ವವನ್ನು ಕೇವಲ ರಾಜಕೀಯ ಘೋಷಣೆ ಅಥವಾ ಪ್ರಚಾರದ ರೂಪದಲ್ಲಿ ಆಚರಿಸುವವರಲ್ಲ, ಬದಲಾಗಿ ಅದನ್ನು ಹೃದಯಪೂರ್ವಕವಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಉದಾಹರಣೆಯಾಗಿದ್ದಾರೆ ಎಂದು ಕೆಡಿಪಿ ಸದಸ್ಯ ಹಾಗೂ ನಿಟ್ಟೂರು ಬ್ಲಾಕ್…

Read More

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More