
ಭಾರಿ ಮಳೆ – ಹೊಸನಗರ ತಾಲೂಕ್ ಸೇರಿದಂತೆ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ(Rain) ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ. ಹೊಸನಗರ ತಾಲೂಕಿಗೆ ರಜೆ – ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಜು.26 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿನಗಳಲ್ಲಿ…