ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು
ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು ಭದ್ರಾವತಿ, ಡಿ. 20: ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ರೈಸ್’ಮಿಲ್ ವೊಂದರಲ್ಲಿ ಡಿ. 19 ರ ಸಂಜೆ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ, ಓರ್ವರು ಮೃತಪಟ್ಟಿರುವುದು ಖಚಿತವಾಗಿದೆ. ಈ ವಿಷಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ‘ಘಟನೆಯಲ್ಲಿ ರಘು ಎಂಬುವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅವರ ಮೃತದೇಹ ಪತ್ತೆ ಹಚ್ಚಲಾಗಿದೆ’ ಎಂದು ಶುಕ್ರವಾರ ಮಾಹಿತಿ ನೀಡಿದ್ದಾರೆ.ರೈಸ್’ಮಿಲ್ ನ ಒಂದು ಬಾಯ್ಲರ್ ಸ್ಪೋಟಗೊಂಡಿದ್ದು, ಒಟ್ಟಾರೆ 7…