
ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು
ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು ರಿಪ್ಪನ್‌ಪೇಟೆ : ಗುರುಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಕಡೆಗೆ ವಿದ್ಯಾರ್ಥಿ ದೆಸೆಯಲ್ಲೇ ಗಮನ ಹರಿಸಿದಾಗ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿ…