ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ ಸುಮಾರು ಏಳು ಗಂಟೆಯ ಸಮಯದಲ್ಲಿ ಶ್ರೀನಿವಾಸ್ ಕಾಮತ್ ರವರಿಗೆ ಸೇರಿದ ತೆಂಗಿನಮರಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ತೆಂಗಿನಮರ ಸುಟ್ಟು ಕರಕಲಾಗಿದೆ. ಸ್ಥಳೀಯರು ಸೇರಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ. ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ…

Read More

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ವಿದ್ಯಾರ್ಥಿಗಳ ಮುಖ ನೋಡದೆ ಅವರ ಧ್ವನಿಯ ಮೂಲಕ ಹೆಸರನ್ನು ಗುರುತಿಸುವ ಕೇರಳದ ಶಿಕ್ಷಕನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಶಿಕ್ಷಕನೋರ್ವ ಅದೇ ಮಾದರಿಯಲ್ಲಿ ಗಮನ ಸೆಳೆದಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ಹೆಬ್ಬಳಗೆರೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದು, ಮೊದಲಿಗೆ ಎಸ್‌ಎಸ್‌ಎಲ್‌ಸಿ…

Read More

ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ

ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ ಹೊಸನಗರ : ಇಲ್ಲಿನ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ  ಕೃಷಿ  ಪತ್ತಿನ ಸಹಕಾರ  ಸಂಘ ಚುನಾವಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಿ ಜಿ ನಾಗರಾಜ್ 10 ಮತಗಳ ಅಂತರದಿಂದ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಸಾಲಗಾರ ರಲ್ಲದ…

Read More

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮೃತಪಟ್ಟಿದ್ದಾರೆ. ದಾವಣಗೆರೆ ನಗರದ ನಿವಾಸಿ ಪರಮೇಶ್ವರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ  ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More