
Hosanagara


ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್
ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ. ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ. ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು…

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ
ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ
ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್ಪೇಟೆ, ಚಂದ್ರೇಶ್ ರಿಪ್ಪನ್ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ , ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು
ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ,…

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು
ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು ಹೊಸನಗರ : ನಾಯಿ ಕಚ್ಚಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೇರುಪುರ ಮೂಲದ ಸಂಗೀತಾ (38) ಮೃತ ದುರ್ಧೈವಿಯಾಗಿದ್ದಾರೆ ಕಳೆದ ಜುಲೈ 14ರಂದು ಇವರಿಗೆ ನಾಯಿ ಕಚ್ಚಿತ್ತು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದಿದ್ದರಿಂದ ರೇಬೀಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ನಂತರ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರೋಗ ಉಲ್ಬಣಗೊಂಡಿದ್ದರಿಂದ ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ
ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು
RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ಪೇಟೆ: ಅಪ್ರಾಪ್ತಯ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪೋಕ್ಸ್ ಪ್ರಕರಣ ದಾಖಲಾಗಿದೆ. ಹರತಾಳು ಗ್ರಾಮದ ಉಮೇಶ ಆರೋಪಿಯಾಗಿದ್ದು, ಹುಂಚ ಸಮೀಪದ ಗ್ರಾಮವೊಂದರ ಅಪ್ರಾಪ್ತಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು ಕಳೆದ ಕೆಲದಿನಗಳಿಂದ ಹರತಾಳಿನ ಉಮೇಶನ ಮನೆಯಲ್ಲಿಯೇ ವಾಸವಿದ್ದಳು ಎನ್ನಲಾಗಿದೆ. ಅಪ್ರಾಪ್ತಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಪ್ರಾಪ್ತೆಯು…

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ
Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…