
ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು
ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು RIPPONPETE | ಇಲ್ಲಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಳೆ ಮಳವಳ್ಳಿ ಗ್ರಾಮದ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಿಗ್ಗೆ ಹಾಲು ತರಲು ತೆರಳುತಿದ್ದ ವೇಳೆಯಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಿಗೆ ಭಯ ಮೂಡಿಸಿದ್ದು ಸಾಕು ಪ್ರಾಣಿಗಳು ಹಾಗೂ ದನಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದೆ.ಚಿರತೆ ಕೆಲ…