
RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ
RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್‌ಐಎಲ್ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. MSIL ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟು ಹಿಡಿದು ಕುಳಿತಿದ್ದರು. ಈ ಸಂಧರ್ಭದಲ್ಲಿ ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿದರು….