Headlines

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಕ್ಯಾಂಟರ್​​ ಚಾಲಕ ಮೃತಪಟ್ಟ ಘಟನೆ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್​ ಈಶಾಮ್​ (32) ಮೃತ ದುರ್ಧೈವಿಯಾಗಿದ್ದಾರೆ. ಡಿ.5ರಂದು ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುವ ರಸ್ತೆಮಾರ್ಗದಲ್ಲಿ ಸಾಸರಹಳ್ಳಿ ಸಮೀಪ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್​ಗೆ ತಗುಲಿದೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಮೃತನ ತಂದೆ ರಿಯಾಜ್ ಅಹ್ಮದ್​…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ಬ್ಯಾಂಕ್ ಉದ್ಯೋಗಿಗೆ ಆನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ – ದೂರು ದಾಖಲು

ಬ್ಯಾಂಕ್  ಉದ್ಯೋಗಿಗೆ  ಲಕ್ಷಾಂತರ ರೂ ವಂಚಿಸಿದ ಆನ್ ಲೈನ್ ಖದೀಮರು ಶಿವಮೊಗ್ಗ: ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ ಬಳಸಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು…

Read More

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಆನಂದಪುರ : ಸಾಲಭಾದೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡೆಹಳ್ಳಿ ಗ್ರಾಪಂ ವ್ಯಾಪ್ತಿಯ ಗೇರುಬೀಸ್ ನಲ್ಲಿ ನಡೆದಿದೆ. ಗೇರುಬೀಸು ನಿವಾಸಿ ರಾಮಚಂದ್ರ (48) ಮೃತ ದುರ್ಧೈವಿಯಾಗಿದ್ದಾರೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವ್ಯವಸಾಯಕ್ಕಾಗಿ ಸಾಲ  ಮಾಡಿದ್ದು ಬೆಳೆಯು ಕೈಕೊಟ್ಟ ಹಿನ್ನಲೆಯಲ್ಲಿ ಮನನೊಂದು ಮನೆಯ ಹಿಂಭಾಗದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಬೆಳಗಿನ ಜಾವ…

Read More

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್…

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More

ರೈಲಿಗೆ ಸಿಲುಕಿ ಮಹಿಳೆ ಸಾವು

ರೈಲಿಗೆ ಸಿಲುಕಿ ಮಹಿಳೆ ಸಾವು ರೈಲಿಗೆ ಸಿಲುಕಿ ಮಹಿಳೆಯೊಬ್ಬರುಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬಿ.ಪಿ.ಕಮಲಾ (35) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More