Headlines

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ ಸರ್ಕಾರಿ ಅಧಿಕಾರಿ, ನೌಕರರು ಕೇವಲ ಭ್ರಷ್ಟಾಚಾರ ರಹಿತವಾಗಿ ಮಾತ್ರವಲ್ಲ ಜೊತೆಗೆ ತಮ್ಮ ವೃತ್ತಿಪರವಾದ ಸಣ್ಣ ಸಣ್ಣ ವಿಷಯಗಳನ್ನು ಅರಿತುಕೊಂಡು ಉತ್ತಮ ನಡತೆಯೊಂದಿಗೆ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಹೇಳಿದರು.  ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ…

Read More

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ. ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. ಎರಡು ಆನೆಗಳ ಮೂಲಕ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ. ಶಿವಮೊಗ್ಗ ಪುರದಾಳು, ಸಿರಿಗೇರೆ ಭಾಗದಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡಿದ್ದವು. ಕಾಡಾನೆ ಹಾವಳಿ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶದ ಹಿನ್ನಲೆ ಕಾಡಾನೆ…

Read More

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…

Read More

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಹಣ ಕಳೆದುಕೊಂಡ ಶಿಕ್ಷಕಿ

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಕಳೆದುಕೊಂಡ ಶಿಕ್ಷಕಿ ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್ ಹುಡುಕಿದ್ದಕ್ಕೆ, ಮಹಿಳೆಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಂಕ್ ಖಾತೆಯಿಂದ 9.19 ಲಕ್ಷ ರೂ. ಕಡಿತಗೊಂಡಿದೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯವಾಗಿಡಲಾಗಿದೆ) ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಮೊಬೈಲ್ ನಂಬರ್ ಹುಡುಕಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ…

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು ಶಿವಮೊಗ್ಗ ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ಮಳೆ ಆರ್ಭಟಿಸಿದೆ. ಬೆಳಿಗ್ಗೆಯೂ ಅರ್ಧ ಗಂಟೆ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ಕುಂಭದ್ರೋಣ ಮಳೆಗೆ ರಾತ್ರಿಯಿಡೀ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ.ನಗರದ ರಸ್ತೆಗಳು ಹಳ್ಳಗಳಾಗಿ ಬದಲಾಗಿವೆ. ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೆಲ್ಲ ನಿದ್ರೆಗೆಟ್ಟರು. ಮನೆಯಿಂದ ನೀರು ಹೊರ ಹಾಕುವಲ್ಲಿ ಹೈರಾಣಾದರು. ಮಳೆಯ ಆರ್ಭಟ ಮುಂಜಾನೆವರೆಗೂ ಒಂದೇ…

Read More

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ….

Read More