Headlines

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಬೆಳಗಿನ ಜಾವ…

Read More

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್…

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More

ರೈಲಿಗೆ ಸಿಲುಕಿ ಮಹಿಳೆ ಸಾವು

ರೈಲಿಗೆ ಸಿಲುಕಿ ಮಹಿಳೆ ಸಾವು ರೈಲಿಗೆ ಸಿಲುಕಿ ಮಹಿಳೆಯೊಬ್ಬರುಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬಿ.ಪಿ.ಕಮಲಾ (35) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ ಸರ್ಕಾರಿ ಅಧಿಕಾರಿ, ನೌಕರರು ಕೇವಲ ಭ್ರಷ್ಟಾಚಾರ ರಹಿತವಾಗಿ ಮಾತ್ರವಲ್ಲ ಜೊತೆಗೆ ತಮ್ಮ ವೃತ್ತಿಪರವಾದ ಸಣ್ಣ ಸಣ್ಣ ವಿಷಯಗಳನ್ನು ಅರಿತುಕೊಂಡು ಉತ್ತಮ ನಡತೆಯೊಂದಿಗೆ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಹೇಳಿದರು.  ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ…

Read More

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ. ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. ಎರಡು ಆನೆಗಳ ಮೂಲಕ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ. ಶಿವಮೊಗ್ಗ ಪುರದಾಳು, ಸಿರಿಗೇರೆ ಭಾಗದಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡಿದ್ದವು. ಕಾಡಾನೆ ಹಾವಳಿ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶದ ಹಿನ್ನಲೆ ಕಾಡಾನೆ…

Read More

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…

Read More

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಹಣ ಕಳೆದುಕೊಂಡ ಶಿಕ್ಷಕಿ

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಕಳೆದುಕೊಂಡ ಶಿಕ್ಷಕಿ ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್ ಹುಡುಕಿದ್ದಕ್ಕೆ, ಮಹಿಳೆಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಂಕ್ ಖಾತೆಯಿಂದ 9.19 ಲಕ್ಷ ರೂ. ಕಡಿತಗೊಂಡಿದೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯವಾಗಿಡಲಾಗಿದೆ) ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಮೊಬೈಲ್ ನಂಬರ್ ಹುಡುಕಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ…

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More