
ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್
ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…