
SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ
ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ,…