
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ ಶಿಕಾರಿಪುರ: ಸದಾಶಿವಪುರ ತಾಂಡದಲ್ಲಿ ಇಂದು ಮುಂಜಾನೆ ಆನವಟ್ಟಿಗೆ ಹೊರಟಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆರೆಯಲ್ಲಿ ಬಿದ್ದ ಅಪಘಾತ ನಡೆದಿದೆ. ಪ್ರಯಾಣಿಸುತ್ತಿದ್ದ ವೇಳೆ ಬಸ್ ಮೊದಲು ಕೆರೆಯ ದಡದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ನೀರಿಗೆ ಜಾರಿದೆ. ಈ ಅವಘಡದಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾರಿಗೂ ಹೆಚ್ಚಿನ ಅನಾಹುತವಾಗಿಲ್ಲ. ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ…