RIPPONPETE |ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ – ಕನ್ನಡಪರ ಹೋರಾಟಗಾರರ ಆಕ್ರೋಶ
ರಿಪ್ಪನ್‌ಪೇಟೆ : ನಾಡಿನಾದ್ಯಂತ ದೀಪಾವಳಿ ಹಬ್ಬದ ನಡುವೆಯೂ ಸಡಗರ ಹಾಗೂ ಸಂಭ್ರದಿಂದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತಿದ್ದು ಅದಕ್ಕೆ ತದ್ವಿರುದ್ಧ ಎಂಬುವಂತೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ 800 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಿರುವ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದಾರೆ.ಈ ಕಾಲೇಜು ಕಲೆ, ಸಾಹಿತ್ಯ,ವಿಜ್ಞಾನ ಮತ್ತು ಕ್ರೀಡೆಯಲ್ಲಿ ತನ್ನದೇ ಆದ ಛಾಫು…