
ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ
ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್ ಬಂಧಿತ ಆರೋಪಿಯಾಗಿದ್ದಾನೆ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿಬಿದ್ದಿದ್ದಾನೆ….