Headlines

SHIVAMOGGA | ಬ್ಲೂಮೂನ್ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ  ನಡೆದಿದೆ . ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More