ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್ ಯಶಸ್ವಿ
ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…