
ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ
ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ. ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು….